ವಿಮಾನ ನಿಲ್ದಾಣದ ಟರ್ಮಿನಲ್‌ಗಳಿಗೆ ಹಾನಿ; ದಾಳಿಯ ಹೊಣೆ ಹೊತ್ತ ಹೌತಿ ಬಂಡುಕೋರರು
ಬೆಳಗಾಯಿತು ವಾರ್ತೆ
ರಿಯಾದ್ :ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಭಾನುವಾರ ನಡೆದ ಮತ್ತೊಂದು ದಾಳಿಯಲ್ಲಿ ಪಾಕಿಸ್ತಾನದ ಪ್ರಜೆಯೊಬ್ಬರು ಮೃತಪಟ್ಟಿದ್ದು, ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಈ ಕುರಿತು ಮಾಹಿತಿ ನೀಡಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ದಾಳಿಯಿಂದ ವಿಮಾನ ನಿಲ್ದಾಣದ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ನಷ್ಟದ ಪ್ರಮಾಣವನ್ನು ಅಂದಾಜಿಸಲಾಗುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ.
ವಿಮಾನ ನಿಲ್ದಾಣದ ಎರಡು ಪ್ರಯಾಣಿಕ ಟರ್ಮಿನಲ್‌ಗಳ ಮೇಲೆ ಕ್ಷಿಪಣಿಗಳು ಅಪ್ಪಳಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿತ್ತು ಎಂದು ಸೌದಿ ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು. ದಾಳಿಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತೆ ಹಾಗೂ ಕಾರ್ಯಾಚರಣೆಗಳ ಮೇಲೆ ಪರಿಣಾಮ ಉಂಟಾಗಿರುವ ಸಾಧ್ಯತೆಯಿದೆ.





