ಅಮರಾವತಿ: ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ರಸಾಯನಶಾಸ್ತçಜ್ಞನನ್ನು ಮಹಾರಾಷ್ಟçದ ಅಮರಾವತಿಯಲ್ಲಿ ಹತ್ಯೆ ಮಾಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ಅವರ ಕೊಲೆ ಪ್ರಕರಣ ಮಾಸುವ ಮುನ್ನವೇ ಅಮರಾವತಿಯಲ್ಲಿ ರಸಾಯನಶಾಸ್ತçಜ್ಞ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಅವರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಉಮೇಶ್ ಪ್ರಹ್ಲಾದರಾವ್ ಕೋಲ್ಹೆ ಅವರ ಹತ್ಯೆ ಸೇಡು ತೀರಿಸಿಕೊಳ್ಳಲು ನಡೆಸಲಾಗಿದೆ ಎಂದು ಸ್ಥಳೀಯ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಕುರಿತು ಪತ್ರವನ್ನು ಸಲ್ಲಿಸಿದ್ದಾರೆ.
ಬಿಜೆಪಿ ನಾಯಕರಿಂದ ಪತ್ರವನ್ನು ಸ್ವೀಕರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಪ್ರಕರಣಕ್ಕೆ ಸಂಬAಧಿಸಿದAತೆ ಎಫ್‌ಐಆರ್ ದಾಖಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.