ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಹೆಚ್ಚಿಸಲು ಮನವಿ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಮಹಿಳಾ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚಿನ ದಿನಗಳಲ್ಲಿ ಮಹಿಳಾ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಿಬ್ಬಂದಿಗಳ ಕೊರತೆ ಉಂಟಾಗಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಪುರುಷ ಪೊಲೀಸ್ ಅಧಿಕಾರಿಗಳೊಂದಿಗೆ ತಮ್ಮ ಅಳಲು ಹೇಳಿಕೊಳ್ಳಲು ಮಹಿಳೆಯರಿಗೆ ತೊಂದರೆ ಆಗುತ್ತಿದೆ ಎಂದು ಸಂಘಟನೆ ದೂರಿದೆ. ಮಹಿಳಾ ಸಮಸ್ಯೆಗಳ ಪರಿಹಾರಕ್ಕಾಗಿ ಸ್ಥಾಪಿತವಾದ ಪೊಲೀಸ್ ಠಾಣೆಗಳು ಹೆಸರಿಗಷ್ಟೇ ಸೀಮಿತವಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಇನ್ನೂ ಕೆಲವು ಪ್ರಕರಣಗಳಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಹಣಕಾಸಿನ ವ್ಯವಹಾರಗಳು ನಡೆಯುತ್ತಿವೆ ಎಂಬ ಅಸಮಾಧಾನ ವ್ಯಕ್ತವಾಗಿದ್ದು, ಇದರಿಂದ ಸಾಮಾನ್ಯ ಮಹಿಳೆಯರಿಗೆ ನ್ಯಾಯ ಸಿಗುವುದು ಕಷ್ಟವಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸ್ ಠಾಣೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಹಿಳೆಯರಿಗಿಂತ ಪುರುಷರ ಸಂಖ್ಯೆ ಹೆಚ್ಚಿರುವುದರಿಂದ ಮಹಿಳೆಯರಿಗೆ ಅಸೌಕರ್ಯ ಉಂಟಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಚಂದ್ರಕುಮಾರಿ, ವರಲಕ್ಷ್ಮಿ, ಟಿ. ಈರಮ್ಮ ಸೇರಿದಂತೆ ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles