ಬೆಳಗಾಯಿತು ವಾರ್ತೆ|www.belagayithu.in
ಕೊಟ್ಟೂರು: ಜಿಲ್ಲಾಧ್ಯಕ್ಷರಾದ ಚನ್ನಬಸವನಗೌಡ ಪಾಟೀಲ್ ರವರ ಸಮ್ಮುಖದಲ್ಲಿ ಶನಿವಾರ ಕೊಟ್ಟೂರಿನ ಯುವ ಮುಖಂಡರಾದ ಬಿ.ಆರ್.ವಿಕ್ರಂ ರವರನ್ನು ಸೇರ್ಪಡೆ ಮಾಡಿಕೊಂಡ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಬಿ ಆರ್.ವಿಕ್ರಂ ಆಯ್ಕೆ ಮಾಡಲಾಯಿತು.
ಈ ಹಿಂದೆ ಬಿಜೆಪಿಯಲ್ಲಿ ಕೆಲಸ ಮಾಡಿದ ಅನುಭವ ವಿಕ್ರಂ ರವರಿಗೆ ಇದೆ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದಿಂದ ದೂರ ಉಳಿದಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸೇರಿಕೊಳ್ಳುವ ವಿಚಾರವನ್ನು ಪಕ್ಷದ ಕಾರ್ಯಕರ್ತರೊಂದಿಗೆ ಹಂಚಿಕೊಂಡಿರುವ ಹಿನ್ನೆಲೆಯಲ್ಲಿ, ಪಕ್ಷಕ್ಕೆ ಸೇರ್ಪಡೆಗೊಂಡರು.
ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಅಥವಾ ಯಾವುದೇ ಪಕ್ಷಗಳನ್ನು ತೊರೆದು ಬಿಜೆಪಿಗೆ ಬಂದರೆ ಸ್ವಾಗತ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಎಚ್.ಎಂ. ಸಚಿನ್ ಕುಮಾರ್, ಮಂಡಕ್ಕಿ ಪ್ರಕಾಶ್ ಉಪಸ್ಥತರಿದ್ದರು.