ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ 924 ಬಾಲ ಗರ್ಭಿಣಿಯರು ಬೆಳಕಿಗೆ ಬಂದಿದೆ ಅವುಗಳನ್ನು ಪರಿಶೀಲನೆ ನಡೆಸಿ ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಶಶಿಧರ್ ಕೋಸಂಬಿ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಳ್ಳಾರಿ ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ 920 ಬಾಲ ಗರ್ಭಿಣಿಯರು ಇದ್ದಾರೆ ಎಂದು ಆರ್ ಸಿಎಚ್ ಪೋರ್ಟಲ್ ನಲ್ಲಿ ದಾಖಲಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಮೌಖಿಕವಾಗಿ ಹೇಳಿದ್ದನ್ನು ದಾಖಲಿಸಲಾಗಿದೆ ಅವುಗಳನ್ನು ಪರಿಶೀಲನೆ ನಡೆಸಿ, 18ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಲ್ಲಿ ಪ್ರಕರಣ ದಾಖಲಿಸಿ ಸಂತ್ರಸ್ತ ಬಾಲಕಿಯರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದರು.ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಪ್ರಕರಣಗಳನ್ನು ತಡೆಗಟ್ಟಲು ಶಿಕ್ಷಣ ಇಲಾಖೆ, ಆಶಾ ಕಾರ್ಯಕರ್ತೆಯರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ, ವಿಜಯ್ ಕುಮಾರ್ ಉಪಸ್ಥಿತರಿದ್ದರು





