ಬಿಜೆಪಿ ಕಾರ್ಯಕರ್ತ ಎಸ್.ಬಿ. ತಿಮ್ಮಪ್ಪ ಕುಟುಂಬಕ್ಕೆ ಅರುಣ ಸಾಂತ್ವನ

ಬಳ್ಳಾರಿ ಚಲೋ ಪಾದಯಾತ್ರೆ ವೇಳೆ ಅಕಾಲಿಕ ನಿಧನ; ಜಿಲ್ಲಾಘಟಕದಿಂದ ಆರ್ಥಿಕ ನೆರವು
ಬೆಳಗಾಯಿತು ವಾರ್ತೆ
ಬಳ್ಳಾರಿ
: ಬಳ್ಳಾರಿ ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಎಸ್.ಬಿ. ತಿಮ್ಮಪ್ಪ ಅವರು ಅಕಾಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಅರುಣ ಅವರು ಶುಕ್ರವಾರ ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಲಕ್ಷ್ಮಿ ಅರುಣ ಹಾಗೂ ಜನಾರ್ದನ್ ರೆಡ್ಡಿ ಅವರು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರ ದುಃಖದಲ್ಲಿ ತಾವು ಹಾಗೂ ಪಕ್ಷದ ಕಾರ್ಯಕರ್ತರು ಜೊತೆಗಿದ್ದೇವೆ ಎಂದು ಭರವಸೆ ನೀಡಿ ಆತ್ಮಸ್ಥೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಮೃತರ ಕುಟುಂಬಕ್ಕೆ ಆರ್ಥಿಕ ಸಹಾಯವನ್ನು ನೀಡಲಾಯಿತು. ತಿಮ್ಮಪ್ಪ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ತುಂಬಲಾರದ ನಷ್ಟವಾಗಿದೆ ಎಂದು ಮುಖಂಡರು ಸಂತಾಪ ವ್ಯಕ್ತಪಡಿಸಿದರು.
ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಮುಖಂಡರಾದ ಓಬಳೇಶ್, ಮಲ್ಲಿಕಾರ್ಜುನ, ಮಹೇಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles