ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: “ನಿಮ್ಮೊಂದಿಗೆ ನಾವಿದ್ದೇವೆ. ಯಾವುದೇ ಸಂದರ್ಭದಲ್ಲೂ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳದೇ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು” ಎಂದು ವಿಧಾನಪರಿಷತ್ ಸದಸ್ಯ ವೈ. ಎಂ ಸತೀಶ್ ಅವರು ಹೇಳಿದರು.
ನಗರದಲ್ಲಿ ಪಾಲಿಕೆ ಇಂಜಿನಿಯರ್ ವೀರೇಶ್ ಅವರ ಮೇಲಾದ ಹಲ್ಲೆ ಖಂಡಿಸಿ ಶುಕ್ರವಾರ ಮಾಡಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ಕಾರಿ ಸಿಬ್ಬಂದಿ ಮತ್ತು ಅಧಿಕಾರಿಗಳ ಮೇಲೆ ಆದ ಹಲ್ಲೆ ಖಂಡನಿಯ. ಇದು ಯಾವತ್ತು ನಡೆಯಬಾರದು. ಈ ರೀತಿಯಲ್ಲಿ ಹಲ್ಲೆ ಮಾಡಿದ ಪಾಲಿಕೆ ಸದಸ್ಯ ವಿ. ಕುಬೇರ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರು, ಪಾಲಿಕೆ ಅಧಿಕಾರಿಗಳು, ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು





