ಬೆಳಗಾಯಿತು ವಾರ್ತೆ |Www.belagayithu.in
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧಿನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. 2 ಲಕ್ಷದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಸೂಚನೆ ನೀಡಲಾಗಿದೆ.
970 ಪುಟಗಳ ಚಾರ್ಜ್‌ಶೀಟ್ – ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ತಲೆದಂಡವಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. 187 ಕೋಟಿ ರೂಪಾಯಿ ಹಗರಣ ಸಂಬಂಧ 4ಸಾವಿರದ 970 ಪುಟಗಳ ಚಾರ್ಜ್‌ಶೀಟ್ ಜೊತೆಗೆ 144 ಪುಟಗಳ ದೂರು ಸಲ್ಲಿಸಿದ್ದರು. ಇಡಿ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ A1 ಆಗಿದ್ದರು.





