ಆರೋಗ್ಯದ ಸಮತೋಲನ ಅಗತ್ಯ: ನ್ಯಾ.ಕೆ.ಜಿ. ಶಾಂತಿ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಆರೋಗ್ಯ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಬಹಳ ಮುಖ್ಯವಾದದ್ದು. ಶಾರೀರಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯದ ಸಮತೋಲನವೂ ಮುಖ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಸಿಬ್ಬಂದಿಗಳಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾಗ ಮಾತ್ರ ನಾವು ಯಾವುದೇ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಮಹಿಳೆಯರು ಸದಾ ಮನೆಯ ಕೆಲಸ ಅಥವಾ ಕಚೇರಿಯ ಕೆಲಸಗಳಲ್ಲಿ ನಿರತರಾಗಿರುತ್ತಾರೆ. ಇದರಿಂದಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅವರಿಗೆ ಕಷ್ಟವಾಗುತ್ತಿದೆ ಎಂದರಲ್ಲದೇ, ಇಂತಹ ಶಿಬಿರಗಳು ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಉತ್ತಮ ವೇದಿಕೆಯಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.
ಶಿಬಿರದಲ್ಲಿ ಭಾಗವಹಿಸಿರುವ ನುರಿತ ವೈದ್ಯರಿಂದ ಮಹಿಳೆಯರು ಸೂಕ್ತ ಸಲಹೆ, ಸೂಚನೆ ಹಾಗೂ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು ಮತ್ತು ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles