ಬಳ್ಳಾರಿ: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಸೊಂಕು ತಡೆಗಟ್ಟುವ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಚುನಾವಣಾಧಿಕಾರಿ ಕಚೇರಿಯೊಳಗೆ ಅಭ್ಯರ್ಥಿ ಸೇರಿದಂತೆ 5ಜನ ಮಾತ್ರ ಪ್ರವೇಶಿಸಬೇಕು ಹಾಗೂ ಮೆರವಣಿಗೆಯಲ್ಲಿ 50 ಕ್ಕಿಂತ ಜಾಸ್ತಿ ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಆದೇಶ ಉಲ್ಲಂಘಿಸಿದ ಅಭ್ಯರ್ಥಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51ರಿಂದ 60ರ ಅನ್ವಯ ಹಾಗೂ ಐಪಿಸಿ ಸೆಕ್ಷನ್ 188 ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಕಲಂ (4),(5) ಮತ್ತು (10)ರಂತೆ ಕ್ರಮಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ