ಬೆಳಗಾಯಿತು ವಾರ್ತೆ
ಬಳ್ಳಾರಿ: ಗುರುವಾರ ನಂ 2 ಮುದ್ದಪೂರ ಗ್ರಾಮದಿಂದ ಕಂಪ್ಲಿ ಶಾಲೆಗೆ ಹೋಗುವ ಮಕ್ಕಳಿಗೆ ತುಂಬ ದಿನದಿಂದ ಬಸ್ ಬರದೆ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದು, ಗುರುವಾರ ಶಾಲಾ ಮಕ್ಕಳು ಶಂಕರ್ ಸಿಂಗ್ ಕ್ಯಾಂಪ್ ಹತ್ತಿರ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಜೆ.ಎನ್ ಗಣೇಶ್ ಸ್ಥಳಕ್ಕೆ ಭೇಟಿ ನೀಡಿ ಸಾರಿಗೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಮತ್ತು ಅಧಿಕಾರಿಗಳು ಹಾಜರಿದ್ದರು.