ಬಳ್ಳಾರಿ:2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ್ದಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಪ್ರಶಸ್ತಿಗೆ ಪಾತ್ರವಾಗಿದ್ದು, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಮತ್ತು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಹುಬ್ಬಳ್ಳಿಯಲ್ಲಿ ಶುಕ್ರವಾರ ರ‍್ಪಡಿಸಿದ್ದ ರಾಜ್ಯಮಟ್ಟದ ಜಲಶಕ್ತಿ ಅಭಿಯಾನಕ್ಕೆ ಚಾಲನೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬಳ್ಳಾರಿ ಜಿಪಂ ನೇತೃತ್ವ ವಹಿಸಿರುವ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಅವರಿಗೆ ಪ್ರಶಸ್ತಿ ವಿತರಿಸಿ ಶಹಾಬ್ಬಾಷ್‍ಗಿರಿ ನೀಡಿದರು. ಬಳ್ಳಾರಿ ಜಿಪಂ ಹಾಲಿ ಸಿಇಒ ನಂದಿನಿ ಕೆ.ಆರ್ ಅವರು ಇದ್ದರು.
ಈ ಸಂರ‍್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಕರ‍್ಯರ‍್ಶಿ ಎಲ್.ಕೆ.ಅತೀಕ್, ಮನರೇಗಾ ಆಯುಕ್ತರು ಹಾಗೂ ವಿಜಯನಗರ ಜಿಲ್ಲೆಯ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಸೇರಿದಂತೆ ಇನ್ನೀತರರು ಇದ್ದರು.