ಜೂನ್ 24ಕ್ಕೆ ಬೆಂಗಳೂರು ಚಲೋ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಸರ್ಕಾರಿ ಶಾಲೆಯಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭಿಸುವುದನ್ನು ಖಂಡಿಸಿ ಜೂನ್ 24ರಂದು ಚಲೋ ಬೆಂಗಳೂರು ಹೋರಾಟದ ಮೂಲಕ ರಾಜ್ಯ ಮಟ್ಟದ ಪತ್ರಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಂಯುಕ್ತ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷೆ ಅರ್ಕಾಣಿ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇರುವ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡುವುದರಿಂದ ಅಂಗನವಾಡಿ ಮುಂಚುವ ಹಂತಕ್ಕೆ ತಲುಪುತ್ತದೆ. ಇದರಿಂದ ಅಲ್ಲಿ ಕೆಲಸ ಮಾಡುವವರು ಬೀದಿಗೆ ಬಿಳುತ್ತಾರೆ. ಹಾಗಾಗಿ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ LKG, UKG, ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲು ನಿರ್ಧಾವಾಗಿದೆ. ಇದರಂತೆ 1008 ಶಿಕ್ಷಕರನ್ನು ಮತ್ತು ಸಹಾಯಕಿಯರನ್ನು ನೇಮಕ ಮಾಡಲು ಆದೇಶ ಹೊರಡಿಸಲಾಗಿದೆ. ಈ ಒಂದು ನಿರ್ಧಾರದಿಂದಾಗಿ. ಈ ಭಾಗದಲ್ಲಿನ ಬಹುತೇಕ ಅಂಗನವಾಡಿಗಳನ್ನು ಮುಚ್ಚಬೇಕಾದ ಅಪಾಯ ಎದುರಾಗಿದೆ. ಇದರಿಂದಾಗಿ ಅಂಗನವಾಡಿ ಉದ್ಯೋಗಿಗಳು ನಿರ್ಗತಿಕರಾಗುವ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಹಿನ್ನೆಲೆಯಲ್ಲಿ LKG, UKG ತರಗತಿಗಳನ್ನು ಅಂಗನವಾಡಿಗಳಲ್ಲೇ ಪ್ರಾರಂಭಿಸಲು ಆದೇಶ ಹೊರಡಿಸಬೇಕು. ಇಲ್ಲದಿದ್ದಲ್ಲಿ ಪರ್ಯಾಯವಾಗಿ 1008 ನೂತನ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಅರ್ಹ ಕಾರ್ಯಕರ್ತೆಯರನ್ನೇ ನೇಮಿಸಲು ಸೂಕ್ತರೀತಿ ಆದೇಶ ಹೊರಡಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಮುಖ್ಯ ಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ. ಇದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ವರ್, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಇವರುಗಳಿಗೆ ಸಹ ಮನವಿಯನ್ನು ಸಲ್ಲಿಸಿದೆ. ಆದರೆ ಈ ವರೆಗೆ ಸರ್ಕಾರದ ವತಿಯಿಂದ ಯವುದೇ ಪ್ರತಿಕ್ರಿಯೆ ಲಭ್ಯವಿಲ್ಲದ ಕಾರಣ ರಾಜ್ಯ ಮಟ್ಟದಲ್ಲಿ ಹೋರಾಟಕ್ಕೆ ದುಮುಕ ಬೇಕಾದ ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಮ್ಮ, ಎಐಟಿಯುಸಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್, ಮಂಗಳ ಗೌರಿ, ಎರ್ರೆಮ್ಮ, ಟಿ. ಇಂದಿರಾ, ಕೆ. ಜಗದೀಶ್ವರಿ ಹಾಜರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles