ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.