ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಜ.1ರಂದು ನಡೆದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ವಿಚಾರಣೆಗೆ ಸಿಐಡಿ ತಂಡ ಬಳ್ಳಾರಿಗೆ ಆಗಮಿಸಿದೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಗುರುತಿಸಲಾದ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಗಲಭೆಗೆ ಕಾರಣವಾದ ಹಿನ್ನೆಲೆ, ಸಂಚು ಹಾಗೂ ಭಾಗಿಯಾಗಿರುವ ಇತರರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣವು ಸಾರ್ವಜನಿಕ ಶಾಂತಿ ಭದ್ರತೆಗೆ ಧಕ್ಕೆ ಉಂಟುಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ವೇಗಗೊಳಿಸಲು ಸಿಐಡಿಗೆ ವಹಿಸಲಾಗಿದೆ. ತನಿಖೆಯ ಭಾಗವಾಗಿ ಸ್ಥಳ ಪರಿಶೀಲನೆ ಹಾಗೂ ಸಾಕ್ಷಿದಾರರ ಹೇಳಿಕೆಗಳನ್ನು ಕೂಡ ದಾಖಲಿಸಲಾಗುತ್ತಿದೆ.
ಈ ನಡುವೆ, ಪ್ರಕರಣದಲ್ಲಿ ಇನ್ನೂ ಕೆಲವರ ಹೆಸರುಗಳು ಹೊರಬರುವ ಸಾಧ್ಯತೆ ಇರುವುದರಿಂದ ವಿಚಾರಣೆ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.





