ಬ್ಯಾನರ್ ಗಲಾಟೆ:ಮಾಹಿತಿ ನೀಡಲು ಮನವಿ

ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ನಗರದ ಸಿರುಗುಪ್ಪ ರಸ್ತೆಯ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಜ.01 ರಂದು ಬ್ಯಾನರ್ ಹರಿದ ವಿಚಾರವಾಗಿ ನಡೆದ ಗಲಾಟೆಯ ಕುರಿತು ರೆಕಾರ್ಡ್ ಮಾಡಿದ ದೃಶ್ಯಾವಳಿಗಳು ಇದ್ದಲ್ಲಿ ಸಾರ್ವಜನಿಕರು ಹೆಚ್ಚಿನ ತನಿಖೆಗಾಗಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 01/2026 ಕಲಂ 103(1), 54, 352, 351(2) ಆಧಾರ 190 ಬಿ.ಎನ್.ಎಸ್-2023 ಹಾಗೂ ಕಲಂ 27 ಆರ್ಮ್ಸ್ ಆಕ್ಟ್-1959 ರಡಿ ಪ್ರಕರಣ ದಾಖಲಾಗಿರುತ್ತದೆ.
ಹಾಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಹಾಗೂ ಇತರೆ ಎಲೆಕ್ಟಾçನಿಕ್ ಸಾಧನಗಳಲ್ಲಿ ರೆಕಾರ್ಡಿಂಗ್ ಮಾಡಿದ್ದ ದೃಶ್ಯಾವಳಿಗಳು ಇದ್ದರೆ ಹೆಚ್ಚಿನ ತನಿಖೆಗಾಗಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವ್ಯಾಟ್ಸಪ್ ಸಂಖ್ಯೆ 9480803045 ನಂಬರ್‌ಗೆ ಕಳಿಸಬಹುದು ಅಥವಾ ಖುದ್ದಾಗಿ ಠಾಣೆಗೆ ಹಾಜರಾಗಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles