ಚಿತ್ರದುರ್ಗ: ತುಂಗಾಭದ್ರ ನದಿಯಿಂದ ಭರಮಸಾಗರ ವ್ಯಾಪ್ತಿಯ 42 ಕೆರೆಗಳಿಗೆ ನೀರು ತುಂಬಿಸುವ ರಾಜನಹಳ್ಳಿ ಏತನೀರಾವರಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮುಂಬರುವ ಆಗಸ್ಟ್15ರೊಳಗೆ ಭರಮಸಾಗರ ಕೆರೆಗೆ ನೀರು ತುಂಬಿಸಲಾಗುವುದು ಎಂದು ಹೊಳಲ್ಕೆರೆ ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಾದ ಎಂ.ಚAದ್ರಪ್ಪ ಹೇಳಿದರು.
ದಾವಣಗೆರೆಯ ಹರಿಹರ ತಾಲ್ಲೂಕಿನ ಹಲಸಬಾಳು ಗ್ರಾಮ ಸಮೀಪದ ರಾಜನಹಳ್ಳಿ ಏತನೀರಾವರಿ ಯೋಜನೆಯ ಜಾಕ್‌ವೆಲ್‌ಕಂಪAಪ್‌ಹೌಸ್‌ಗೆ ಭಾನುವಾರ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ ನಂತರ ಅವರು ಮಾತನಾಡಿದರು.
ಭರಮಸಾಗರ ಏತನೀರಾವರಿ ಯೋಜನೆಗೆ ರೂ.565 ಕೋಟಿ ಅನುದಾನ ಮಂಜೂರಾಗಿದ್ದು, ಭರಮಸಾಗರ ವ್ಯಾಪ್ತಿಯ 42 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರನ್ನು ತುಂಬಿಸುವ ಯೋಜನೆ ಇದಾಗಿದೆ ಎಂದರು.