ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು “ಬಸವ ಕಾಯಕ ರತ್ನ ಪ್ರಶಸ್ತಿ” ನೀಡಿ ಸನ್ಮಾನಿಸಲಾಯಿತು.
ವಿಶ್ವಗುರು ಬಸವೇಶ್ವರ ಜಯಂತಿ ಉತ್ಸವ ಸಮಿತಿಯಿಂದ ನಡೆದ ಈ ಗೌರವ ಸಮಾರಂಭದಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಎನ್. ವೀರಭದ್ರಗೌಡ ಸೇರಿದಂತೆ ಹಲವಾರು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರ ಶಾಸಕ ಭರತ್ ರೆಡ್ಡಿ, ಮೇಯರ್ ಗಾದೆಪ್ಪ, ಸದಸ್ಯೆ ಸುರೇಖ ಮಲ್ಲನಗೌಡ, ಜಿಪಂ ಸಿಇಓ ಮಹಮ್ಮದ್ ಹಾರೀಸ್ ಸುಮೇರ್, ಎಡಿಸಿ ಮಹಮ್ಮದ್ ಝುಬೇರ್, ಪಾಲಿಕೆ ಆಯುಕ್ತ ಪಿ.ಸಿ. ಮಂಜುನಾಥ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.
ಅದೇ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ಬಿಚ್ಚುಗಲ್ ಪಂಚಾಕ್ಷರಪ್ಪ, ರಾಷ್ಟ್ರೀಯ ಬಸವ ದಳದ ರವಿಶಂಕರ್, ಕುರುಕುಪ್ಪೆ ಮಲ್ಲಿಕಾರ್ಜುನ ಸೇರಿದಂತೆ ಅನೇಕ ಸಮಾಜ ಮುಖಂಡರು ಭಾಗವಹಿಸಿದರು.
ಪ್ರಶಸ್ತಿ ಪುರಸ್ಕೃತರಾದ ಡಾ. ಸುಮನ್ ಡಿ. ಪನ್ನೇಕರ್, ಎನ್. ವೀರಭದ್ರಗೌಡ, ನಗರ ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ವೀರಶೈವ ಸಮಾಜದ ಮುಖಂಡರಾದ ಮಸೀದಿಪುರ ಸಿದ್ರಾಮನಗೌಡ, ಕೇಣಿ ಬಸಪ್ಪ, ಕುರಿಹಟ್ಟಿ ರಾಜಾ ಅವರಿಗೆ ಶಾಲು ಹೊದಿಸಿ, ಫಲಕ ನೀಡಿ ಸನ್ಮಾನಿಸಲಾಯಿತು.




