ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಜಿಲ್ಲೆಯಾದ್ಯಂತ ಬೇಸಿಗೆಯ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸರ‍್ವಜನಿಕರು ಬಿಸಿಲಿನ ಶಾಖಾಘಾತಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಸಿರುಗುಪ್ಪ ತಾಲ್ಲೂಕಿನ ಚಿಕ್ಕ ಬಳ್ಳಾರಿ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಅವರು, ಗರ್ಭಿಣಿಯರು ಮತ್ತು ಮಕ್ಕಳ ಮನೆಗಳಿಗೆ ಖುದ್ದು ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಬಿಸಿಲಿನ ಪ್ರಖರತೆಯಿಂದ ತಪ್ಪಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು.
ಮಧ್ಯಾಹ್ನ ಹೊರಗೆ ಬರಬೇಡಿ:
ತೀವ್ರ ಬಿಸಿಲಿರುವ ಹಿನ್ನಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 04 ಗಂಟೆಯವರೆಗೆ ತಾಯಂದಿರು, ವಯೋವೃದ್ಧರು ಮತ್ತು ಮಕ್ಕಳು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು. ಅನಿವರ‍್ಯ ಸಂರ‍್ಭಗಳಲ್ಲಿ ಹೊರಬರುವಾಗ ಛತ್ರಿ ಬಳಸಬೇಕು ಹಾಗೂ ಕುಡಿಯುವ ನೀರನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಕು. ಮಕ್ಕಳನ್ನು ಕರೆದೊಯ್ಯುವಾಗ ಅವರ ತಲೆಯ ಮೇಲೆ ಒದ್ದೆಯಾದ ಬಟ್ಟೆಯನ್ನು ಹಾಕಿ ಬಿಸಿಲಿನ ತಾಪ ತಗುಲದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಅಪಾಯದ ಲಕ್ಷಣಗಳು:
ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಅತಿಯಾದ ತಲೆನೋವು, ತಲೆಸುತ್ತುವಿಕೆ, ಕೆಂಪಾದ ಒಣ ರ‍್ಮ, ಸ್ನಾಯುಗಳ ಸೆಳೆತ ಹಾಗೂ ವಾಂತಿ ಕಂಡುಬರಬಹುದು. ಮಕ್ಕಳು ಆಹಾರ ಸೇವಿಸಲು ನಿರಾಕರಿಸುವುದು, ಕಡಿಮೆ ಮೂತ್ರ ವಿರ‍್ಜನೆ, ಬಾಯಿ ಒಣಗುವಿಕೆ, ಆಲಸ್ಯ ಹಾಗೂ ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಕಾಣಬಹುದು ಎಂದು ಅವರು ತಿಳಿಸಿದರು.
ಹಾಗಾಗಿ ಯಾರಾದರೂ ಬಿಸಿಲಿನಿಂದ ಪ್ರಜ್ಞೆ ತಪ್ಪಿದರೆ ತಕ್ಷಣ ಅವರನ್ನು ನೆರಳಿರುವ ಜಾಗಕ್ಕೆ ಸ್ಥಳಾಂತರಿಸಿ, ಬಟ್ಟೆಗಳನ್ನು ಸಡಿಲಗೊಳಿಸಿ ಕಾಲುಗಳನ್ನು ಎತ್ತರಿಸಿ ಮಲಗಿಸಬೇಕು. ತಣ್ಣೀರಿನಿಂದ ದೇಹವನ್ನು ಒರೆಸಿ ತಕ್ಷಣ ಹತ್ತಿರದ ವೈದ್ಯರನ್ನು ಸಂರ‍್ಕಿಸಬೇಕು ಎಂದರು..
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಟಿ.ವಿರೂಪಾಕ್ಷಿ. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ರವಿಕುಮಾರ್, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಎಲ್ಲಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಲಿಂಗರಾಜ್, ರಾಚೋಟಯ್ಯ ಸ್ವಾಮಿ, ಪ್ರಾಥಮಿಕ ಸುರಕ್ಷಾ ಅಧಿಕಾರಿ ಮಹಾಲಕ್ಷ್ಮಿ ಸೇರಿದಂತೆ ಆಶಾ ಕರ‍್ಯರ‍್ತೆಯರು, ಸರ‍್ವಜನಿಕರು ಉಪಸ್ಥಿತರಿದ್ದರು.





