ಬಳ್ಳಾರಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಪಂಗಳಲ್ಲಿದ್ದುಕೊಂಡು ಗ್ರಾಮದ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು.
ನಗರದ ಜಿಪಂನ ನಜೀರ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಳ್ಳಾರಿ ಜಿಲ್ಲೆಯಲ್ಲಿರುವ ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ,ಜಿಪಂ ಸಿಇಒ ಜಿ.ಲಿಂಗಮೂರ್ತಿ, ಬುಡಾ ಅಧ್ಯಕ್ಷ ಪಾಲನ್ನ, ಎಪಿಎಂಸಿ ಅಧ್ಯಕ್ಷ ಉಮೇಶ ಸೇರಿದಂತೆ ಬಳ್ಳಾರಿ,ಸಿರಗುಪ್ಪ,ಸಂಡೂರು,ಕುರುಗೋಡು ಮತ್ತು ಕಂಪ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು,ಜಿಪಂ ಅಧಿಕಾರಿಗಳು ಹಾಗೂ 100 ಗ್ರಾಪಂಗಳ ಪಿಡಿಒಗಳು ಇದ್ದರು