ಬೆಳಗಾಯಿತು ವಾರ್ತೆ
ವಿಜಯನಗರ: ಸರ್ಕಾರಿ ಬಸ್, ಲಾರಿ ಮುಖಾಮುಖಿ ಡಿಕ್ಕಿ ಹೋಡೆದ ಪರಿಣಾಮ ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ಹೊಸಪೇಟೆ ತಾಲೂಕಿನ ಧರ್ಮಸಾಗರದ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ.
ಹೊಸಪೇಟೆಯಿಂದ ಬಳ್ಳಾರಿ ಕಡೆ ಹೊರಟ್ಟಿದ್ದ ಸರ್ಕಾರಿ ಬಸ್ಸಿಗೆ ಲಾರಿ ಢಿಕ್ಕಿ ಹೊಡೆದಿದ್ದು, ಗಾಯಾಳುಗಳು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾದವರಿಗೆ ಗಾದಿಗನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.