ಬೆಳಗಾಯಿತು ವಾರ್ತೆ
ಕೊಟ್ಟೂರು: ಶುಕ್ರವಾರ ನೂತನ ಪೊಲೀಸ್ ಠಾಣೆಯ ಕಟ್ಟಡ ಉದ್ಘಾಟನೆಯನ್ನು ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ರವರು ಉದ್ಘಾಟನೆ ಮಾಡಲಿದ್ದಾರೆ.
ಕೊಟ್ಟೂರು ತಾಲೂಕಿನ ಶ್ರೀ ಗುರು ಮರಿ ಕೊಟ್ಟೂರೇಶ್ವರ ದೇವಸ್ಥಾನದ ಪಕ್ಕದಲ್ಲಿ ನಿರ್ಮಾಣಗೊಂಡಿರುವ ನೂತನ ಪೊಲೀಸ್ ಠಾಣೆ ಕಾಮಗಾರಿಕೆ ಪೂರ್ಣ ಗೊಂಡಿದ್ದು, ಉದ್ಘಾಟನೆ ಭಾಗ್ಯ ಕೂಡಿಬಂದಿದೆ. ನೂತನ ಪೊಲೀಸ್ ಠಾಣೆ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ನಿರ್ಮಾಣಗೊಂಡಿದೆ. ಎರಡು ಕಚೇರಿ ಒಂದೇ ಕಡೆ ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿ.
ಕಾರ್ಯಕ್ರಮದಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್. ಭೀಮಾ ನಾಯಕ್, ಸಂಸದರಾದ ವೈ.ದೇವೇಂದ್ರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.