ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.
25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು
ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ಗೆ ಸಂಬಂಧಿಸಿದ ಗನ್‌ನಿಂದಲೇ 12 ಎಂಎಂ ಬುಲೆಟ್ ಫೈರ್ ಮಾಡಿದ್ದಾನೆ. ಹೀಗಾಗಿ ಗುರುಚರಣ್ ಸಿಂಗ್ ಹೊರತು ಪಡಿಸಿ ಕ್ರೈಮ್ ನಂಬರ್ 4ರಲ್ಲಿನ 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.





