ಬಳ್ಳಾರಿ ಬ್ಯಾನರ್​​ ಗಲಾಟೆ:ಸಿಐಡಿಗೆ

ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ ವೇಳೆ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನುಸಿಐಡಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದು ಗೃಹ ಸಚಿವ ಪರಮೇಶ್ವರ್​​ ಹೇಳಿದ್ದರು. ಆ ಬೆನ್ನಲ್ಲೇ ಆದೇಶ ಹೊರಬಿದ್ದಿದೆ.
ಬ್ಯಾನರ್​​ ಗಲಾಟೆ ಪ್ರಕರಣದ ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಈ ಹಿಂದೆಯೂ ಗೃಹ ಸಚಿವ ಪರಮೇಶ್ವರ್​​ ಸುಳಿವು ನೀಡಿದ್ದರು. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸ್ತೇವೆ. ಹತ್ಯೆಗೆ ಪೆಟ್ರೋಲ್ ಬಾಂಬ್ ಬಳಕೆ ಮಾಡಿದ್ದಾರೆಂಬ ಆರೋಪವೂ ಇದ್ದು,ತನಿಖೆ ಆದಮೇಲೆ ಅದೆಲ್ಲ ಗೊತ್ತಾಗುತ್ತೆ. ಅಗತ್ಯಬಿದ್ದರೆ ಸಿಐಡಿಗೆ ಪ್ರಕರಣ ಕೊಡುತ್ತೇವೆ ಎಂದು ಹೇಳಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles