ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿ ಪಿಯುಸಿಯಲ್ಲಿ ಪ್ರಥಮ ದರ್ಜೆ ಸಾಧನೆ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿಯೊಬ್ಬರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎಸ್. ಅಶೋಕ್ ಕುಮಾರ್ ಅವರು ಕಲಾ ವಿಭಾಗದಲ್ಲಿ ಶೇಕಡಾ 80.1 ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಮೂಲತಃ ಬೆಂಗಳೂರಿನವರಾದ ಅಶೋಕ್ ಕುಮಾರ್ ಅವರು ಕಳೆದ ಏಳು ವರ್ಷಗಳಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಶಿಕ್ಷಣದ ಮೇಲಿನ ಆಸಕ್ತಿ ಹಿನ್ನೆಲೆಯಲ್ಲಿ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಜೈಲು ಆಡಳಿತವು ದೂರಶಿಕ್ಷಣದ ಮೂಲಕ ಅವರಿಗೆ ಅವಕಾಶ ಕಲ್ಪಿಸಿತ್ತು.
ಜೈಲಿನಲ್ಲಿಯೇ ಪ್ರತ್ಯೇಕ ಕೊಠಡಿಯಲ್ಲಿ ಓದಿ ಪರೀಕ್ಷೆಗೆ ಹಾಜರಾದ ಅವರು ಒಟ್ಟು 600ರಲ್ಲಿ 481 ಅಂಕಗಳನ್ನು ಗಳಿಸಿದ್ದಾರೆ. ವಿಷಯವಾರು ಕನ್ನಡದಲ್ಲಿ 82, ಇಂಗ್ಲಿಷ್‌ನಲ್ಲಿ 69, ಇತಿಹಾಸದಲ್ಲಿ 94, ಅರ್ಥಶಾಸ್ತ್ರದಲ್ಲಿ 84, ಸಮಾಜಶಾಸ್ತ್ರದಲ್ಲಿ 77 ಮತ್ತು ರಾಜ್ಯಶಾಸ್ತ್ರದಲ್ಲಿ 75 ಅಂಕಗಳನ್ನು ಪಡೆದಿದ್ದಾರೆ.
ಶಿಕ್ಷೆ ಅನುಭವಿಸುತ್ತಿದ್ದರೂ ಓದುವ ಹವ್ಯಾಸವನ್ನು ಬೆಳೆಸಿಕೊಂಡಿರುವ ಅಶೋಕ್ ಕುಮಾರ್ ಅವರು ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು ಈ ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣ ಮುಂದುವರಿಸಲು ಆಸಕ್ತಿ ತೋರಿದರೆ ಅಗತ್ಯ ಸೌಲಭ್ಯಗಳನ್ನು ನೀಡಲಾಗುವುದು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ Alok Kumar ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles