ಬಳ್ಳಾರಿ: ಪಿಯುಸಿ ಫಲಿತಾಂಶದಲ್ಲಿ ಚೈತ್ರ ವಿ.ಜಿ ಸಾಧನೆ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: 2026ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಳ್ಳಾರಿಯ ನಂದಿ ಇಂಟರ್ನ್ಯಾಷನಲ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಚೈತ್ರ ವಿ.ಜಿ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
600 ಅಂಕಗಳಿಗೆ 566 ಅಂಕಗಳನ್ನು ಗಳಿಸಿರುವ ಚೈತ್ರ ಅವರು 94.33% ಶೇಕಡಾವಾರು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ತಮ್ಮ ಶ್ರಮ, ಏಕಾಗ್ರತೆ ಹಾಗೂ ನಿರಂತರ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಚೈತ್ರ ಅವರ ಯಶಸ್ಸು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ತಮ್ಮ ಮಗಳ ಸಾಧನೆಗೆ ತಂದೆ ಅಲ್ಲಿಪುರ ನಾಗರಾಜ ಮತ್ತು ತಾಯಿ ಹರ್ಷ ವ್ಯಕ್ತಪಡಿಸಿದ್ದು, ಇದು ನಮ್ಮ ಕುಟುಂಬಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles