21.4 C
Bellary
Saturday, February 1, 2025

Localpin

spot_img

ಬಳ್ಳಾರಿ: ಬಾಣಂತಿಯರ ಸರಣಿ ಸಾವಿಗೆ ಐವಿ ದ್ರಾವಣ ಕಾರಣ

ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬ0ಧಿಸಿದ0ತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ ದ್ರಾವಣ ಕಾರಣ ಅನ್ನೋ ವರದಿ ಬಹಿರಂಗವಾಗಿದೆ.
ಬಾಣ0ತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ವರದಿಯೊಂದನ್ನು ನೀಡಿದ್ದು, ಹೆರಿಗೆಯಾಗುವ ಗರ್ಭಿಣಿಯರಿಗೆ ಶಸ್ತ್ರ ಚಿಕಿತ್ಸೆ ವೇಳೆ ನೀಡಿದ ದ್ರಾವಣ ಕಳಪೆಯಾಗಿತ್ತು ಎಂಬ ವರದಿ ನೀಡಿದೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ದ್ರಾವಣದ ಬಗ್ಗೆ ದೂರು ಬಂದಿರುವುದರಿAದ ಇಂಟ್ರಾವೀನಸ್ ದ್ರಾವಣ ಬಳಕೆ ಮಾಡದಂತೆ ಈಗಾಗಲೇ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಗ್ಲೂಕೋಸ್ ಬಳಸದಂತೆ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಸಾವಿನ ಬಗ್ಗೆ ತನಿಖೆ ನಡೆಸಲು ಸರ್ಕಾರ ತಂಡ ಕಳುಹಿಸಿತ್ತು. ಇದೀಗ ಶಸ್ತ್ರ ಚಿಕಿತ್ಸೆ ವೇಳೆ ಈ ಕಳಪೆ ಐವಿ ದ್ರಾವಣದಿಂದ ದೇಹದಲ್ಲಿ ದಿಢೀರ್ ಬದಲಾವಣೆ, ಅಡ್ಡ ಪರಿಣಾಮಗಳಿಂದ ಸಾವಾಗಿದೆ ಎಂದು ತಂಡ ವರದಿ ಸಲ್ಲಿಕೆ ಮಾಡಿದೆ.
ತಪ್ಪು ಸಾಬೀತಾದ್ರೆ ಕಂಪನಿ ಬ್ಲಾಕ್‌ಲಿಸ್ಟ್ಗೆ
ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್, ಬಾಣಂತಿಯರ ಸಾವಿನ ಬಗ್ಗೆ ತನಿಖೆ ನಡೆಸಲಾಗ್ತಿದೆ. ಪ್ರಾಥಮಿಕ ವರದಿ ನಮಗೆ ಬಂದಿದೆ. ವರದಿಯಲ್ಲಿ ಮೇಲ್ನೋಟಕ್ಕೆ ಐವಿ ಪ್ಲುಯೆಡ್‌ನಿಂದ ಸಮಸ್ಯೆ ಆಗಿದೆ ಅನ್ನೋದು ಗೊತ್ತಾಗಿದೆ. ಹೀಗಾಗಿ ಸ್ಯಾಂಪಲ್‌ಗಳನ್ನ ಲ್ಯಾಬ್‌ಗೆ ಕಳುಹಿಸಲಾಗಿದೆ. ಇನ್ನೊಂದು ವಾರದಲ್ಲಿ ವರದಿ ಬರಲಿದೆ. ಮೆಡಿಕಲ್ ನೆಗ್ಲಿಜೆನ್ಸಿ ಇದ್ಯಾ ಅನ್ನೋದನ್ನ ಕೂಡ ನೋಡ್ತಿವಿ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು. ಈ ಹಿಂದೆ ಕೂಡ ಎರಡು ಬ್ಯಾಚ್ ಮೇಲೆ ಆರೋಪ ಇತ್ತು. ಎರಡು ಬ್ಯಾಚ್ ಬ್ಲಾಕ್‌ಲಿಸ್ಟ್ಗೆ ಸೇರಿಸಲಾಗಿತ್ತು. ಕೋರ್ಟ್ನಲ್ಲಿ ಸಾಬೀತು ಆದ ಬಳಿಕ ಮತ್ತೆ ಔಷಧ ಪೂರೈಕೆ ಮಾಡಲಾಗಿದೆ. ಇದೀಗ ಈ ಪ್ರಕರಣದ ಬಗ್ಗೆ ವರದಿ ಬಂದ ಬಳಿಕ ತಪ್ಪು ಸಾಬೀತಾದಲ್ಲಿ ಬ್ಲಾಕ್ ಲಿಸ್ಟ್ಗೆ ಸೇರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles