ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ: ಮಂಗಳವಾರ ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಪೇಪರ್-1ರ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಪರೀಕ್ಷಾರ್ಥಿಗಳಿಂದ ಕೆಪಿಎಸ್‌ಸಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬಳ್ಳಾರಿಯ ಸೇಂಟ್ ಜಾನ್ಸ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಓಪನ್ ಆಗಿರುವ ಪ್ರಶ್ನೆ ಪತ್ರಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪರೀಕ್ಷಾ ಕೇಂದ್ರಕ್ಕೆ ಬರುವ ಮುಂಚೆಯೇ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಆಗಿತ್ತು ಎನ್ನಲಾಗಿದೆ.
ಇನ್ನೂ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಪ್ರಶ್ನಿಸಿದ್ದರೂ ಆಮೇಲೆ ನೋಡೋಣ ಎಂದು ಕೊಠಡಿ ಮೇಲ್ವಿಚಾರಕರು ಸಮಜಾಯಿಷಿ ನೀಡಿದ್ದರಂತೆ. ಹೀಗಾಗಿ ಪರೀಕ್ಷೆ ಬರೆದು ಹೊರಗೆ ಬಂದ್ಮೇಲೆ ಪರೀಕ್ಷಾರ್ಥಿಗಳು ಕಿಡಿಕಾರಿದ್ದಾರೆ, ಸೇಂಟ್ ಜಾನ್ ಪದವಿ ಪೂರ್ವ ಕಾಲೇಜಿನ ರೂಂ ನಂ 18 ಹಾಗೂ 19 ಓಪನ್ ಆಗಿರೋ ಪ್ರಶ್ನೆ ಪತ್ರಿಕೆ ಬಂದಿರುವುದಾಗಿ ಆರೋಪಿಸಿದ್ದಾರೆ. ಹೀಗಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಕಿಡಿಕಾರಿದ್ದು, ಮರು ಪರೀಕ್ಷೆ ಬರೆಸಬೇಕು ಎಂದು ಒತ್ತಾಯಿಸಿದ್ದಾರೆ.





