ಬಳ್ಳಾರಿ:ಪೊಲೀಸರಿಂದ ಇಬ್ಬರು ಸರ ಕಳ್ಳರ ಬಂಧನ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಬಳ್ಳಾರಿ ಜಿಲ್ಲಾ ಪೊಲೀಸರಿಂದ ಇಬ್ಬರು ಸರ ಕಳ್ಳರ ಬಂಧನ ಸುಮಾರು 295 ಗ್ರಾಂ ಚಿನ್ನಾಭರಣ ಹಾಗೂ ಒಂದು ಬೈಕ್ ಸೇರಿ ಒಟ್ಟು 18,70,000 ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ರಂಜಿತ್ ಕುಮಾರ್ ಭಂಡಾರಿ ಅವರು ತಿಳಿಸಿದ್ದಾರೆ.

ನಗರದ ಗ್ರಾಮೀಣ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚೆಗೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಗಾಂಧಿನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಹಾಗೂ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಸೇರಿ ಒಟ್ಟು 10 ಸರ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.
ಆರೋಪಿತ ರಿಂದ ಸುಮಾರು 17,70,000 ರೂ ಮೌಲ್ಯದ ಚಿನ್ನಾಭರಣ ಹಾಗೂ ಒಂದು ಬೈಕ್ ಸೇರಿ ಒಟ್ಟು 18,70000 ರೂ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles