ಮುಖ್ಯಮಂತ್ರಿ ಪದಕಕ್ಕೆ ಬಳ್ಳಾರಿ ಪೊಲೀಸರ ಆಯ್ಕೆ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಬಳ್ಳಾರಿ ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಕಾಳಿಂಗ.ಎ ಹಾಗೂ ಸಿರಗುಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಇವರ ಸೇವಾ ನಿಷ್ಠೆ, ಕರ್ತವ್ಯಪರತೆ ಮತ್ತು ಸಾರ್ವಜನಿಕರ ಭದ್ರತೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪದಕ ನೀಡಲಾಗಿದೆ.
ಈ ಸಾಧನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪನ್ನೇಕರ್ ಅವರು ಇಬ್ಬರು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಉತ್ತಮ ಸೇವೆ ಸಲ್ಲಿಸುವಂತೆ ಹಾರೈಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles