ಬಳ್ಳಾರಿ:ಬಿಜೆಪಿಯಿಂದ ಪ್ರತಿಭಟನೆ

ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ: ಮುಡಾದಲ್ಲಿ ಆದ ಹಗರಣದ ವಿರುದ್ಧ ಬಿಜೆಪಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾದ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯಂದ್ರ ಅವರನ್ನು ದಾರಿ ಮದ್ಯದಲ್ಲಿಯೆ ಬಂಧಿಸಿದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಶುಕ್ರವಾರ ರಾಯಲ್ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.
ಇದೇ ವೇಳೆ ಬಿಜೆಪಿಯ ಬಳ್ಳಾರಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ ಮೋಕ ಅವರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹಗರಣಗಳ ಸರ್ಕಾರವಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲ ಒಂದು ಹಗರಣದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಇದೊಂದು ಗುಂಡಾ ಸರ್ಕಾರವಾಗಿದೆ. ಇವರ ಭ್ರಷ್ಟಾಚಾರದ ಬಗ್ಗೆ ಪ್ರತಿಭಟನೆ ಮಾಡಿದರೆ ನಮ್ಮ ಅಧ್ಯಕ್ಷರನ್ನ ಬಂಧನ ಮಾಡುವ ಕನಿಷ್ಠ ಮಟ್ಟಕ್ಕೆ ಇಳಿದಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರಕಾರ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ನಾಯಕರನ್ನು ಬಂಧಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರವಲ್ಲ, ಇದು ಟಿಪ್ಪು ಸುಲ್ತಾನ್ ಸರಕಾರ ಎಂದು ಕಾಂಗ್ರೆಸ್ ಸರಕಾರ ವಿರುದ್ಧ ಕಿಡಿಕಾರಿದರು.
ಮುಡಾ ಹಗರಣದಲ್ಲಿ ಕೋಟಿ ಕೋಟಿ ಹಣ ಕೊಳ್ಳೆ ಹೊಡೆದಿದ್ದಾರೆ. ಲೂಟಿ ಬಗ್ಗೆ ಪ್ರಶ್ನೆ ಮಾಡಿ ಪ್ರತಿಟನೆ ಮಾಡಿದರೇ ಬಂಧಿಸುವುದರಲ್ಲಿ ಯಾವ ನ್ಯಾಯವಿದೆ. ಕಾಂಗ್ರೆಸ್ ಸರಕಾರ ಹಿಟ್ಲರ್ ನೀತಿಯನ್ನು ಅನುಸರಿಸ್ತಿದೆ. ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಬಿಜೆಪಿ ಮುಖಂಡರಾದ ಮಲೇಶ, ಶರಣ್ಣ, ಸೋಮನಗೌಡ ಸೇರಿ ಇತರರಿದ್ದರು

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles