37.5 C
Bellary
Friday, April 26, 2024

Localpin

spot_img

ಬಳ್ಳಾರಿ:ರೂ.1.30 ಲಕ್ಷ ನಗದು ಹಣ ಜಪ್ತಿ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ,ಮಾ.24: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ ರೂ.1,30,380 ನಗದು ಹಣವನ್ನು 93-ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ವೈ.ಬೂದಿಹಾಳ್ ಚೆಕ್ ಪೋಸ್ಟ್ ಬಳಿ ಫ್ಲೈಯಿಂಗ್ ಸ್ಕ್ವಾಡ್ ತಂಡ ಜಪ್ತಿ ಮಾಡಲಾಗಿದೆ ಮತ್ತು ಪ್ರಕರಣ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ ಸ್ಕ್ವಾಡ್, 24 ಎಸ್‍ಎಸ್‍ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ. ಈವರೆಗೆ ಒಟ್ಟು 45 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles