ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಬಳ್ಳಾರಿಯ ಹೊಸಪೇಟೆ ರಸ್ತೆಯಲ್ಲಿರುವ ಬೆಸ್ಟ್ ಕಾಲೇಜ್ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಬಾರಿ ವಿಜ್ಞಾನ ವಿಭಾಗದಲ್ಲಿ ಪಿ. ವೆಂಕಟ ಸಾಯಿ ಅವರು 600ರಲ್ಲಿ 594 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ್ಯಾಂಕ್ ಹಾಗೂ ಜಿಲ್ಲೆಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಇ. ಸಾಥ್ವಿಕಾ ಅವರು 600ರಲ್ಲಿ 591 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ 8ನೇ ರ್ಯಾಂಕ್ ಹಾಗೂ ಜಿಲ್ಲೆಯಲ್ಲಿ 4ನೇ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ಸಾಧನೆಯ ಹಿನ್ನೆಲೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಆಡಳಿತ ಮಂಡಳಿಗೆ ಅಭಿನಂದನೆಗಳ ಸುರಿಮಳೆಯಾಗಿದೆ. ಸಂಸ್ಥೆಯು ತನ್ನ ‘ಅಕಾಡೆಮಿಕ್ ಎಕ್ಸಲೆನ್ಸ್’ ಪರಂಪರೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವ ವಿಶ್ವಾಸ ವ್ಯಕ್ತವಾಗಿದೆ.
ಹೆಚ್ಚಿನ ಮಾಹಿತಿಗಾಗಿ 98814 23456, 9991223456 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ.





