ಬೆಳಗಾಯಿತು ವಾರ್ತೆ|Www.belagayithu.in
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಡ್ ನಂ.34ರ ರಾಜೀವ್ ಗಾಂಧಿ ನಗರದಲ್ಲಿ ಕುಡಿಯುವ ನೀರು, ಒಳಚರಂಡಿ ಹಾಗೂ ಪೇವರ್ಸ್ ಅಳವಡಿಸುವ ಕಾಮಗಾರಿಗೆ
ಮಾಜಿ ಮಹಾಪೌರರು ಹಾಗೂ ಸದಸ್ಯರಾದ ರಾಜೇಶ್ವರಿ ಸುಬ್ಬರಾಯುಡು ಅವರು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಹಲವಾರು ವರ್ಷಗಳಿಂದ ಈ ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಇಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಸಾರ್ವಜನಿಕರ ಸಮಸ್ಯೆಯನ್ನು ಮನಗಂಡು 15ನೇ ಹಣಕಾಸು ಅನುದಾನದಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಅಭಿವೃದ್ಧಿ ಕಾರ್ಯದಿಂದ ಸ್ಥಳೀಯ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿ, ರಾಜೇಶ್ವರಿ ಸುಬ್ಬರಾಯುಡು ಅವರ ಕಾರ್ಯವನ್ನು ಮೆಚ್ಚಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಕಟ್ಟಾ ರಘು, ತುಕಾರಾಂ, ಷನ್ಮೂಘ, ಬಾಬು, ಕಟ್ಟಿ, ಜಂಬಣ್ಣ, ಲೋಕೇಶ್, ಯುವ ಮುಖಂಡ ಯೋಗಾನಂದ ರೆಡ್ಡಿ ಸೇರಿದಂತೆ ಹಲವರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.





