7.3 C
New York
Monday, December 5, 2022

Buy now

spot_img

ಏಕಕಾಲಕ್ಕೆ 20 ಸಾವಿರ ಯೋಗಾಸಕ್ತರಿಂದ ಯೋಗಾಭ್ಯಾಸ

ಬೆಳಗಾಯಿತು ವಾರ್ತೆ
ಬಳ್ಳಾರಿ : ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಬಳ್ಳಾರಿ ಹೊರವಲಯದ ಕೊಳಗಲ್ ಏರ್‍ಸ್ಟ್ರೀಪ್ ಬಳಿ ಇದೇ ಸೆ.17ರಂದು ಬೃಹತ್ ಯೋಗಾಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಗಿನ್ನೆಸ್ ಹಾಗೂ ವಿಶ್ವ ದಾಖಲೆ ನಿರ್ಮಾಣಕ್ಕಾಗಿ ರಾಜ್ಯದಾದ್ಯಂತ ಏಕಕಾಲಕ್ಕೆ ಯೋಗಾಭ್ಯಾಸ ನಡೆಯಲಿದೆ. ಬಳ್ಳಾರಿಯಲ್ಲಿ ನಡೆಯಲಿರುವ ಯೋಗಭ್ಯಾಸ ಕಾರ್ಯಕ್ರಮದಲ್ಲಿ 20 ಸಾವಿರ ಯೋಗಾಸಕ್ತರು ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಭರದಿಂದ ಕೈಗೊಳ್ಳುತ್ತಿದೆ.
ಈ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಯಶಸ್ವಿಯಾಗಿ ಜರುಗುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬೃಹತ್ ಯೋಗಾಥಾನ್ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬೃಹತ್ ಯೋಗಾಥಾನ್ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .
ಜಿಲ್ಲಾಡಳಿತ, ಜಿಲ್ಲಾಪಂಚಾಯತ ,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಆಯುμï ಇಲಾಖೆ,ಆಯುμï ಟಿವಿ,ನೆಹರು ಯುವ ಕೇಂದ್ರ ಹಾಗೂ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಯೋಗಾಥಾನ್ ಕಾರ್ಯಕ್ರಮವನ್ನು ಸೆ.17ರಂದು ಬೆಳಗ್ಗೆ 9ಕ್ಕೆ ಬಳ್ಳಾರಿಯ ಕೊಳಗಲ್ ಏರ್‍ಸ್ಟ್ರೀಪ್ ಆವರಣದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.ಜಿಲ್ಲೆಯಲ್ಲಿ ಕಡ್ಡಾಯವಾಗಿ 20 ಸಾವಿರ ಜನರು ಈ ಯೋಗಾಥಾನ್‍ದಲ್ಲಿ ಪಾಲ್ಗೊಳ್ಳಬೇಕು;ಪಾಲ್ಗೊಳ್ಳುವವರು ಕಡ್ಡಾಯವಾಗಿ ನೋಂದಣಿಯಾಗಿರಬೇಕು;ನೋಂದಣಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಶಾಲಾ-ಕಾಲೇಜುಗಳ ಪ್ರಾಂಶುಪಾಲರು,ಶಿಕ್ಷಕರು ಅಗತ್ಯ ಕ್ರಮಕೈಗೊಳ್ಳಬೇಕು;ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ಉದಾಸೀನತೆ ಮಾಡುವಂತಿಲ್ಲ ಎಂದು ಅವರು ಸೂಚನೆ ನೀಡಿದರು.
ಇಡೀ ರಾಜ್ಯದಲ್ಲಿಯೇ ಅತ್ಯಂತ ಯಶಸ್ವಿಯಾಗಿ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಜರುಗಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ. ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಯೋಗ ತರಬೇತಿ ಸಂಸ್ಥೆಗಳಿವೆ,ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು. ಆಯುμï ವೈದ್ಯಕೀಯ ವಿದ್ಯಾರ್ಥಿಗಳು, ಎನ್.ಎಸ್.ಎಸ್.ಸ್ವಯಂ ಸೇವಕರು ,ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿನ್ನೆಸ್ ಹಾಗೂ ವಿಶ್ವದಾಖಲೆ ನಿರ್ಮಾಣದ ಬೃಹತ್ ಕಾರ್ಯದಲ್ಲಿ ನಾವೆಲ್ಲ ಪಾಲುದಾರರಾಗಬೇಕು ಎಂದು ಮನವಿ ಮಾಡಿದರು.
ಯೋಗಾಥಾನ್ 2022 ಗಿನ್ನೆಸ್ ಹಾಗೂ ವಿಶ್ವದಾಖಲೆ ಸೃಷ್ಟಿಸಲು ರಾಜ್ಯದಾದ್ಯಂತ ಏಕಕಾಲದಲ್ಲಿ ಯೋಗಾಭ್ಯಾಸ ಆಯೋಜಿಸಲಾಗುತ್ತಿದೆ. ಬಳ್ಳಾರಿಯಲ್ಲಿ ಸೆ.14ರಂದು ಯೋಗಾಥಾನ್‍ಗೆ ಪೂರ್ವಭ್ಯಾಸ(ರಿಹರ್ಸಲ್)ವನ್ನು ಕೊಳಗಲ್ ಏರ್‍ಸ್ಟ್ರೀಪ್‍ನಲ್ಲಿ ಆಯೋಜಿಸಲಾಗುವುದು ಎಂದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,593FollowersFollow
0SubscribersSubscribe
- Advertisement -spot_img

Latest Articles