ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ತಾಲೂಕಿನ ಕಾರೆಕಲ್ಲು ಗ್ರಾಮದ ಹೊರವಲಯದಲ್ಲಿರುವ ಬಸಯ್ಯ ಫ್ಯಾಕ್ಟರಿ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ದಂಪತಿಗೆ ಗಂಭೀರ ಗಾಯಗಳಾಗಿವೆ.
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯ ಹಿಂಭಾಗದ ಚಕ್ರಕ್ಕೆ ಬೈಕ್ ಸವಾರನು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಗಂಡ-ಹೆಂಡತಿಗೆ ತೀವ್ರ ರಕ್ತಸ್ರಾವವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ತಕ್ಷಣ ಬಸಯ್ಯ ಫ್ಯಾಕ್ಟರಿ ಸಿಬ್ಬಂದಿ ಗಾಯಾಳುಗಳಿಗೆ ನೆರವು ನೀಡಿ ಆಂಬುಲೆನ್ಸ್ ಮೂಲಕ ಸಮೀಪದ ಟ್ರಾಮಾ ಕೇರ್ ಆಸ್ಪತ್ರೆಗೆ ಸಾಗಿಸಿದರು.
ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪಿಡಿ ಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮಾರೆಡ್ಡಿ ಪರಿಶೀಲನೆ ನಡೆಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.





