ಬೆಳಗಾಯಿತು ವಾರ್ತೆ | Www.belagayithu.in
ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲ ಸರಬರಾಜಿನಲ್ಲಿ ದುರುಪಯೋಗವನ್ನು ತಡೆಗಟ್ಟಲು ಮತ್ತು ವಿತರಣೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ಇ-ಕೆವೈಸಿಯನ್ನು ಕಡ್ಡಾಯಗೊಳಿಸಿದೆ.
ದೇಶದ ಎಲ್ಲಾ ಎಲ್‌ಪಿಜಿ ಗ್ರಾಹಕರು ತಮ್ಮ ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು (e-KYC) ಪೂರ್ಣಗೊಳಿಸುವುದು ಕಡ್ಡಾಯ ಎಂದು ‘ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ’ ತಿಳಿಸಿದೆ.
ಈ ಕುರಿತು, ‘ಎಲ್ಲಾ ಗ್ರಾಹಕರು ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು (e-KYC) ಪೂರ್ಣಗೊಳಿಸಬೇಕಾಗುತ್ತದೆ. ಈಗ ನಿಮ್ಮ ಮನೆಯಿಂದಲೇ ತೈಲ ಕಂಪನಿಯ ಮೊಬೈಲ್ ಆ್ಯಪ್ ಮತ್ತು ಆಧಾರ್ ಫೇಸ್‌ಆರ್‌ಡಿ ಅಪ್ಲಿಕೇಶನ್ ಬಳಸಿ ಪರಿಶೀಲಿಸಿ’ ಎಂದು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಹಾಗೆಯೇ, ಎಲ್‌ಪಿಜಿ ವಿತರಕರನ್ನು ಸಂಪರ್ಕಿಸುವಂತೆ ಸಲಹೆ ನೀಡಿರುವ ಸಚಿವಾಲಯ, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಯನ್ನೂ ನೀಡಿದೆ.





