39 C
Bellary
Wednesday, May 29, 2024

Localpin

spot_img

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ
: ವಾಲ್ಮೀಕಿ ಅಭಿವೃದ್ಧಿ ನಿಗಮದ ಲೆಕ್ಕ ಅಧೀಕ್ಷಕ ಚಂದ್ರಶೇಖರ್ ಅವರ ಆತ್ಮಹತ್ಯೆ ಖಂಡಿಸಿ ನಗರದ ರಾಯಲ್ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು.
ನಂತರ ಮಾತನಾಡಿದ ಎನ್ ರವಿ ಕುಮಾರ್ ಅವರು, ರಾಜ್ಯದಲ್ಲಿ ಕೊಲೆ, ದರೋಡೆ,ಕಳ್ಳತನ, ಭ್ರಷ್ಟಾಚಾರ, ಆತ್ಮಹತ್ಯೆಗಳಂತಹ ಘಟನೆಗಳು ನಡೆಯುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಲೆಕ್ಕ ಅಧಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಪಿ. ಚಂದ್ರಶೇಖರ ಅವರು ಸರ್ಕಾರದ ಒತ್ತಡವನ್ನು ತಾಳಲಾಗದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಆಗಿದ್ದು, ಕೂಡಲೇ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯ ಸರ್ಕಾರ ಹದಗೆಟ್ಟಿದೆ ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ನಿಗಮದ 187 ಕೋಟಿ ಹಣ ಅಧಿಕಾರಿಗಳಿಗೆ ಗೊತ್ತಿಲ್ಲದೆ ವರ್ಗಾವಣೆ ಆಗುತ್ತೆ ಅಂದ್ರೆ ಇದಕ್ಕೆ ಯಾರು ಹೊಣೆ ? 50 ಕೋಟಿ ಹಣವನ್ನು ಡ್ರಾ ಮಾಡಿಕೊಂಡು ಬರಲು ಅಲ್ಲಿಯ ಅಧಿಕಾರಿಗಳಿಗೆ ಮೌಖಿಕವಾಗಿ ಸಚಿವರು ಹೇಳುತ್ತಾರೆ. ಇದಕ್ಕೆ ಅವರು ಒಪ್ಪದಿದ್ದಾದ ಅವರ ಸಹಿ ಇಲ್ಲದೆ ಹಣವನ್ನು ಡ್ರಾ ಮಾಡಲಾಗುತ್ತದೆ. ಈ 50 ಕೋಟಿ ಹಣ ಡ್ರಾ ಆದಮೇಲೆ ಚಂದ್ರಶೇಖರ ಅವರಿಗೆ ಈ ವಿಷಯ ಗೊತ್ತಾಗಿ ಅವರು ಡೇತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಳುತ್ತಾರೆ. ಇದರ ಸಂಪೂರ್ಣ ಹೊಣೆಯನ್ನು ಸಚಿವ ನಾಗೇಂದ್ರ ಅವರು ಹೊರಬೇಕಾಗುತ್ತದೆ ಎಂದು ಅವರು ಹೇಳಿದರು.
ಚಂದ್ರಶೇಖರ ಅವರು ತಮ್ಮ ಡೇತ್ ನೋಟ್ ನಲ್ಲಿ ಹೇಳಿದ್ದಾರೆ ಸಚಿವರು ಮೌಖಿಕವಾಗಿ ನನಗೆ ಹಣ ಡ್ರಾ ಮಾಡಲು ಹೇಳಿದ್ದಾರೆ ಎಂದು ಉಲ್ಲೇಖ ಮಾಡಿದ್ದಾರೆ. ಇಷ್ಟೇಲ್ಲಾ ಆದರೂ ಸಚಿವರು ಸಾಕ್ಷಿ ಕೇಳುವುದರಲ್ಲಿ ಅರ್ಥ ಇಲ್ಲ ಅವರು ರಾಜೀನಾಮೆ ನೀಡಲೇ ಬೇಕು ಎಂದು ಅವರು ಪಟ್ಟು ಹಿಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಮೋಕ, ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles