36.7 C
Bellary
Wednesday, May 29, 2024

Localpin

spot_img

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಬೆಳಗಾಯಿತು ವಾರ್ತೆ | www.belagayithu.in
ಬೆಂಗಳೂರು, ಏಪ್ರಿಲ್​ 29: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ  ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್.

ಶ್ರೀನಿವಾಸ ಪ್ರಸಾದ್​ ಅಳಿಯಂದಿರು: ದೇವರಾಜು ಐಆರ್​ಎಸ್ ಅಧಿಕಾರಿ, ಹರ್ಷವರ್ಧನ್ ನಂಜನಗೂಡು ಮಾಜಿ ಶಾಸಕ, ಡಾ.ಎನ್.ಎಸ್. ಮೋಹನ್ (ಮೂಳೆ ಮತ್ತು ಕೀಲು ತಜ್ಷ) ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮೈಸೂರಿನ ಅಶೋಕಪುರಂ ಶಾಲಾ ಆವರಣದಲ್ಲಿ ಬೆಳಗ್ಗೆ 11.30ರಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಕಲ ಸರ್ಕಾರಿ ಗೌರವದೊಂದಿಗೆ ಸಂಜೆ ಅಂಬೇಡ್ಕರ್​ ಟ್ರಸ್ಟ್​​ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles