ಹೈದ್ರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಎರಡು ದಿನಗಳ ರಾಷ್ಟಿçÃಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಸಭೆ ಇಂದಿನಿAದ ಆರಂಭಗೊAಡಿದ್ದು, ಜುಲೈ ೩ರ ಸಂಜೆಯವರೆಗೆ ನಡೆಯಲಿದೆ. ೨೦೨೩ರಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈ ಸಭೆಯನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ.
ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೈದರಾಬಾದ್‌ನ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಪಕ್ಷದ ರಾಷ್ಟಿçÃಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿದರು.
ಬಿಜೆಪಿ ರಾಷ್ಟಿçÃಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ಬಿಜೆಪಿ ನಾಯಕಿ ವಸುಂಧರಾ ರಾಜೆ, ಆರ್ಥಿಕತೆ ಮತ್ತು ಬಡವರ ಕಲ್ಯಾಣದತ್ತ ಗಮನ ಹರಿಸಲಾಗುವುದು. ಪ್ರತಿ ಮತಗಟ್ಟೆಗೆ ೨೦೦ ಕ್ರಿಯಾಶೀಲ ಕಾರ್ಯಕರ್ತರ ಅಗತ್ಯವಿದೆ. ಇದಕ್ಕಾಗಿ ವಾಟ್ಸಾಪ್ ಗ್ರೂಪ್ ಅನ್ನು ರಚನೆ ಮಾಡಲಿದ್ದು ತಳಹಂತದ ಕಾರ್ಯಕರ್ತರೂ ಒಳಗೊಳ್ಳಲಿದ್ದಾರೆ ಎಂದು ಹೇಳಿದರು
ಇದಕ್ಕೂ ಮುನ್ನ ರಾಷ್ಟಿçÃಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಹೈದ್ರಾಬಾದ್ ಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಲ್ಲಿನ ಕನ್ನಡಿಗರೊಂದಿಗೆ ಸಂವಾದ ನಡೆಸಿದರು. ಕಾಚಿಗುಡ ದ ಲಿಂಗA ಪಲ್ಲಿಯಲ್ಲಿರುವ ನೃಪತುಂಗ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಇತರರು ಉಪಸ್ಥಿತರಿದ್ದರು.