ಬಳ್ಳಾರಿಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ವಿರೋಧಿಸಿ ಬಳ್ಳಾರಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರ್ಯಕರ್ತರು ಗುರುವಾರ ನಗರದ ರಾಯಲ್ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಂತರ್ ಮಂತರ್‌ನಲ್ಲಿ ನಡೆದ ಬೆಳವಣಿಗೆಗಳನ್ನು ಖಂಡಿಸಿದ ಅವರು, ಕಾಂಗ್ರೆಸ್‌ನ ನಡೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯ ವೇಳೆ ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಳಿಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಪ್ರತಿಭಟನೆ ಮುಕ್ತಾಯಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ, ವಿಧಾನ ಪರಿಷತ್ ಸದಸ್ಯ ವೈ ಎಂ. ಸತೀಶ್, ಹನುಮಂತಪ್ಪ, ಕೆ. ಪುಷ್ಪ ಚಂದ್ರಶೇಖರ, ಸುರೇಖಾ ಮಲ್ಲನಗೌಡ್ರು ಸೇರಿದಂತೆ ಹಲವರು ಹಾಜರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles