ಬೆಳಗಾಯಿತು ವಾರ್ತೆ| www.belagayithu.in
ಬೆಂಗಳೂರು: ಹಾವೇರಿ ಜಿಲ್ಲೆಯ ಶಿಗ್ಗಾವಿ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದರು. 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಂಸದರಾಗಿ ಚುನಾಯಿತರಾಗಿದ್ದರಿಂದ, ಶನಿವಾರ ತಮ್ಮ ವಿಧಾನಸಭೆ ಸದಸ್ಯತ್ವಕ್ಕೆ ಸ್ವಇಚ್ಚೆಯಿಂದ ರಾಜೀನಾಮೆಯನ್ನು ನೀಡಿದ್ದಾರೆ.





