ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಇದೇ ತಿಂಗಳು 21,22,23ರಂದು ಆರ್ಯವೈಶ್ಯ ಸಮುದಾಯದ ವತಿಯಿಂದ ಬಾಕ್ಸ್ ಕ್ರಿಕೆಟ್ ಲೀಗ್ ಆಯೋಜನೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ವಿಶ್ವೇಶ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇರುವ ಪತ್ರಿಕಾಭವನದಲ್ಲಿ ಬುಧವಾರ ಆಯೋಜನೆ ಮಾಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಮ್ಮ ಸಮುದಾಯದ ಯುವಕರು ಒಟ್ಟಿಗೆ ಸೇರುವ ಉದ್ದೇಶದಿಂದ ನಾವು ಈ ಕ್ರಿಕೆಟ್ ಲೀಗ್ ಆಯೋಜನೆ ಮಾಡಿದ್ದೆವೆ. ಇದರಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ವಿಜೇತರಿಗೆ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು ಎಂದರು. ಕ್ರಿಕೆಟ್ ಲೀಗ್ ನ ಉದ್ಘಾಟನೆ ಕಾರ್ಯಕ್ರಮವನ್ನು ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಆಗಮಿಸಲಿದ್ದು, ಅತಿಥಿಗಳಾಗಿ ನಗರದ 23ನೇ ವಾರ್ಡ್ ನ ಪಾಲಿಕೆ ಸದಸ್ಯ ಎಂ. ಪ್ರಭಂಜನ್ ಕುಮಾರ್ ಅವರು ಭಾಗವಹಿಸಲಿದ್ದಾರೆ. ನಂತರ ಜೂನ್ 23ರಂದು ಲೀಗ್ ನ ಸಮಾರೋಪ ಸಮಾರಂಭಕ್ಕೆ ಬಿಜೆಪಿಯ ಗಾಲಿ ಲಕ್ಷ್ಮಿ ಅರುಣ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಹುಲ್, ಡಾ. ರಾಮ ಕಿರಣ, ಶ್ರೀಧರ್ , ಸಂಕೇತ್, ವಿಷ್ಣು, ಬಾಲಾಜಿ, ವಿನಾಯಕ, ಅಕೀಲ್, ನಾಗೇಶ್ ಸೇರಿದಂತೆ ಇತರರು ಹಾಜರಿದ್ದರು.





