ಬ್ರೇಕ್ ಫೆಲ್: ಹಣ್ಣಿನ ಅಂಗಡಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ:
ಮಸ್ಕಿ ಡಿಪೋದ ಕೆಎಸ್‌ಆರ್‌ಟಿಸಿ ಸರಕಾರಿ ಬಸ್‌ೊಂದು ಇಂದು ಬೆಳಗ್ಗೆ ನಗರದ ಮೋತಿ ಸರ್ಕಲ್‌ನಲ್ಲಿ ಬ್ರೇಕ್ ಫೆಲ್ ಆಗಿ ನಿಯಂತ್ರಣ ತಪ್ಪಿ ಹಣ್ಣಿನ ಅಂಗಡಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅಪಘಾತದ ಪರಿಣಾಮವಾಗಿ ಒಬ್ಬ ಮಹಿಳೆಗೆ ಗಾಯವಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವೇಳೆ ಬಸ್‌ನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ದೊಡ್ಡ ಅನಾಹುತ ತಪ್ಪಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles