ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಹೊಸ ಮುಖ್ಯಮಂತ್ರಿಥಿ ನೇಮಕವಾಗುವವರೆಗೂ ಯಡಿಯೂರಪ್ಪನವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ.ರಾಜಿನಾಂಎ ಸಲ್ಲಿಸಲು ಹೊರಟ ಯಡಿಯೂರಪ್ಪನವರ ಜೊತೆ ಸಚಿವರಾದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಲಕ್ಷ್ಮಣ ಸವದಿ, ಮಾಧುಸ್ವಾಮಿ, ಡಾ.ಕೆ ಸುಧಾಕರ್ ಸಾಥ ನೀಡಿದರು.
ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು, ದೇಶದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಕೃತಜ್ಞತೆಗಳು, 75 ವರ್ಷ ದಾಟಿದ ನನ್ನ ಮೇಲೆ ಅಭಿಮಾನ ಇಟ್ಟು ನನಗೆ ಎರಡು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದ್ದಾರೆ. ಅವರಿಗೆ ಮತ್ತೊಮ್ಮೆ ಕೃತಜ್ಞತೆಗಗಳು.
ಸ್ವಇಚ್ಛೆಯಿಂದ ರಾಜೀನಾಮೆ
ನನ್ನ ಮೇಲೆ ದೆಹಲಿಯಿಂದ ಯಾವುದೇ ಒತ್ತಡ ಇಲ್ಲ. ಬೇರೆಯವರಿಗೆ ಅವಕಾಶ ಸಿಗಬೇಕೆಂದು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ. ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಆದರೆ, ಎರಡು ವರ್ಷ ತುಂಬಿದ ದಿನ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ರಾಜೀನಾಮೆ ಕೊಟ್ಟಿದ್ದೇನೆ. ಮುಂದಿನ ಮುಖ್ಯಮಂತ್ರಿ ಯಾರ ಆಗಬೇಕೆಂದು ಶಿಫಾರಸು ಮಾಡುವುದಿಲ್ಲ. ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ. 4 ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ನೀಡಿದ ರಾಜ್ಯದ ಜನತೆಗೆ ಎಂದಿಗೂ ಋಣಿ ಎಂದು ಹೇಳಿದ್ದಾರೆ.