ಬಸ್ ಅಪಘಾತ:9 ಮಂದಿ ಸಜೀವ ದಹನ

ಬೆಳಗಾಯಿತು ವಾರ್ತೆ | Www.belagayithu.in
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್​ಗೆ ಬೆಂಕಿ ಹೊತ್ತಿಕೊಂಡು 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ.
ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತರ ಡಿಎನ್ ಎ ಪರೀಕ್ಷೆ
ಮೃತರ ಗುರುತು ದೃಢೀಕರಣಕ್ಕೆ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ. ಕೆಲವರ ಕುಟುಂಬಸ್ಥರು ಇನ್ನೂ ಸಂಪರ್ಕಕ್ಕೆ ಸಿಗದೇ ಆತಂಕದಲ್ಲಿದ್ದಾರೆ. ಮಾವಳ್ಳಿ ತಂಡದಲ್ಲಿ ಬಿಂದು ಮತ್ತು ಅವರ ಐದು ವರ್ಷದ ಮಗುವಿನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಇದುವರೆಗೆ 5 ಮಂದಿ ಮೃತರ ಗುರುತು ಪತ್ತೆಹಚ್ಚಲಾಗಿದೆ ಎಂದಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles