ಚಿಕ್ಕಮಗಳೂರು : ಕರೋನ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಇಲಾಖೆಯ ಪೊಲೀಸ್ ಇಲಾಖೆಯ ಗುರುತರ ಜವಾಬ್ದಾರಿಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ಜರುಗಿದ ನಿರ್ಗಮನ ಕವಾಯಿತಿನಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯದಲ್ಲಿನ ಒಂದು ಲಕ್ಷ ಪೊಲೀಸರ ಜೊತೆಗೆಇಂದಿನಿಂದ ಮತ್ತಷ್ಟು ಪೊಲೀಸರು ಸೇರ್ಪಡೆಯಾಗುತ್ತಿದ್ದಾರೆ ಎಂದರು.
ದೇಶದಲ್ಲೇ ಕರ್ನಾಟಕ ಪೊಲೀಸರಿಗೆ ಒಳ್ಳೆ ಹೆಸರಿದೆ. ಆಧುನಿಕ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಅಪರಾಧ ಕೃತ್ಯಗಳನ್ನು ತ್ವರಿತವಾಗಿ ಬೇಧಿಸಬೇಕೆಂದರು.