ಸಿಎಂ ಆಗಿರುವುದು ದೈವಿಚ್ಛೆ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ನಮ್ಮ ಹೈಕಮಾಂಡ್ ಕಾರಣ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ತಾವೆಲ್ಲರೂ ನೀಡಿದ ಜವಾಬ್ದಾರಿ ದೊಡ್ಡದಿದೆ ಎಂಬ ಅರಿವು ನನಗಿದೆ;ತಾವು ನನ್ನ ಮೇಲೆ ಹಾಕಿರುವ ಶಾಲು ತಮ್ಮ ಶ್ರೀರಕ್ಷೆ ಎಂದು ಭಾವಿಸಿರುವೆ;ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ನನ್ನ ಮೇಲಿಟ್ಟುಕೊಂಡಿರುವ ನಿರೀಕ್ಷೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು.
ಎಸ್. ಕೆ. ಮೋದಿ ಗುಣಗಾಣ: ಎಸ್. ಕೆ. ಮೋದಿ ಅವರು ಈ ಮಣ್ಣಿನಿಂದ ಗಳಿಸಿದ್ದ ಸಂಪತ್ತನ್ನು ಜನರ ವಿದ್ಯೆಗೆ ದಾನ ಮಾಡಿದ್ದಾರೆ. ನೈತಿಕವಾಗಿ ಇದು ಇತರರಿಗೆ ಮಾದರಿ ಎಂದು ಮೋದಿ ಅವರ ದಾನವನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ,ಬಿ.ಶ್ರೀರಾಮುಲು,ಸಿ.ಸಿ.ಪಾಟೀಲ್,ಸಂಸದರಾದ ವೈ.ದೇವೇಂದ್ರಪ್ಪ,ಕರಡಿ ಸಂಗಣ್ಣ,ಸೈಯದ್ ನಾಸೀರ್ ಹುಸೇನ್, ಶಾಸಕರಾದ ಸೋಮಶೇಖರ್ ರೆಡ್ಡಿ, ನಾಗೇಂದ್ರ, ಸೋಮಲಿಂಗಪ್ಪ, ಕೆ.ಸಿ.ಕೊಂಡಯ್ಯ,ಅಲ್ಲಂ ವೀರಭದ್ರಪ್ಪ, ಶಶೀಲ್ ನಮೋಶಿ,ಈ.ತುಕಾರಾಂ,ಬುಡಾ ಅಧ್ಯಕ್ಷ ಪಾಲನ್ನ,ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ತಿಪ್ಪಣ್ಣ ಹಾಗೂ ಜನಪ್ರತಿನಿಧಿಗಳು ಹಾಗೂ ವಿವಿ ಸಂಘದ ಪದಾಧಿಕಾರಿಗಳು ಇದ್ದರು.