39.7 C
Bellary
Friday, April 26, 2024

Localpin

spot_img

ಕುಡಿಯುವ ನೀರಿಗೆ ಸಮಸ್ಯೆ ಇದ್ದಲ್ಲಿ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಮೇವಿನ ಕೊರತೆ ಉಂಟಾದಲ್ಲಿ ಹಾಗೂ ಬೆಳೆ ಹಾನಿ ಪರಿಹಾರದ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ ದೂರುಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರಂಭಿಸಲಾಗಿರುವ ಸಹಾಯವಾಣಿ ಸಂಖ್ಯೆ 1077 ಅಥವಾ 08392-277100 ಗೆ ಕರೆ ಮಾಡಿ ತಿಳಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೋರಿದ್ದಾರೆ.
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಳ್ಳಾರಿ ಜಿಲ್ಲೆಯ 5 ತಾಲ್ಲೂಕುಗಳನ್ನು (ಬಳ್ಳಾರಿ, ಸಂಡೂರು, ಸಿರುಗುಪ್ಪ, ಕುರುಗೋಡು ಮತ್ತು ಕಂಪ್ಲಿ)  ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿ ಆದೇಶಿಸಿದೆ. ಮುಂದಿನ ದಿನಗಳಲ್ಲಿ ಬರದ ತೀವ್ರತೆ ಹೆಚ್ಚಾಗುವ ಸಂಭವದಿರುವುದರಿಂದ  ಈ ಸಮಸ್ಯೆಯನ್ನು ಎದುರಿಸಲು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿಕೊಳ್ಳಲಾಗಿದ್ದು, ಕುಡಿಯುವ ನೀರು, ಮೇವಿನ ಕೊರತೆಯಾದಲ್ಲಿ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles