23.5 C
Bellary
Wednesday, June 12, 2024

Localpin

spot_img

ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ,ಮೇ 27:ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 31 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಟೊಯೋಟ ಕಿರ್ಲೋಸ್ಕರ ಕಂಪನಿಯಲ್ಲಿ ಅಪ್ರೆಂಟೀಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ.ಹೆಚ್.ಎಂ.ಪಂಡಿತಾರಾಧ್ಯ ಅವರು ತಿಳಿಸಿದ್ದಾರೆ.
ಸಂದರ್ಶನದಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ತರಬೇತಿದಾರರು ಭಾಗವಹಿಸಬಹುದು.
ದಾಖಲೆಗಳು:
ಸಂದರ್ಶನದಲ್ಲಿ ಭಾಗವಹಿಸುವವರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್‍ನ ಪ್ರತಿ ಹಾಗೂ ಸ್ವ-ವಿವರವುಳ್ಳ ಬಯೋಡೇಟಾ ಮತ್ತು ತಪ್ಪದೇ ಸ್ಮಾರ್ಟ್ ಮೊಬೈಲ್‍ನ್ನು ತರಬೇಕು. 18 ವರ್ಷ ಮೇಲ್ಪಟ್ಟವರು ಅರ್ಹರಾಗಿರುತ್ತಾರೆ. ಮೇ 31 ರಂದು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದ್ದು, ಜೂನ್ 01 ರಂದು ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಅರ್ಹರು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles